ಸೂರ್ಯ ಕಾಲು

ನಡೀವಾಗ ಯಾರಾದರೂ ಜತೆಗೆ ಬೇಕು.
ಬೇರೇ ಬೇರೇ ಸೂರ್ಯನ ಬೆಳಕಿಗೆ ಮೈಕಾಯಿಸಿಕೊಂಡಿದ್ದರೂ ಪರವಾಗಿಲ್ಲ. ಜತೆಗಿರಬೇಕು. ಜತೆಗಿರೋ ಮನಸ್ಸಿದ್ದರೂ ಸುಲಭ ಅಲ್ಲ. ಒಬ್ಬೊಬ್ಬರಿಗೆ ಒಂದೊಂದು ನಮೂನೆ ಕಾಲು. ಆನೆ ಕಾಲು, ಕುದುರೆ ಕಾಲು, ಇಲಿ ಕಾಲು. ಕೆಲವರಿಗೆ ಹಕ್ಕಿ ಕಾಲು. ಇನ್ನು ಕೆಲವರಿಗೆ ಕಾಲಿಲ್ಲದೇನೂ ಹೋಗತೀನಿ ಅನ್ನೋ ಹಾವಿನ ಛಲವೇ ಕಾಲು.
ತುಂಬಾ ದೂರದ ದಾರಿ;
ಏರು ಪೇರು;
ಹಳ್ಳ ಕೊಳ್ಳ;
ಬೆಟ್ಟ ಕಣಿವೆ;
ಟ್ರಾಫಿಕ್ಕು ಹೊಗೆ;
ತುಂಬಾ ಗೋಜಲಿನ ದಾರಿ;
ಸುಸ್ತಾದರೆ ಏನು ಮಾಡೋದು? ಕೇಳೋದು ಏನು ಬಂತು? ಜೇಬಿಂದ ಒಂದು ಮರ ತೆಗೆದು ನೆಟ್ಟುಕೊಂಡು, ಅದರ ನೆರಳಲ್ಲಿ ಕೂರೋದು. ಸೂರ್ಯನ ಝಳ ಜಾಸ್ತಿ ಆಯ್ತ? ಅವನನ್ನ ಸಮುದ್ರದಲ್ಲಿ ಮುಳುಗಿಸೋದು. ಜೋಳಿಗೆಯಿಂದ ಒಂದು ತುಂಡು ಚಂದ್ರನ್ನ ತೆಗೆದು ಮೋಡದ ಹಿಂದೆ ನೇತು ಹಾಕೋದು.
ರಸಿಕತೆ ಉಕ್ಕಿದರೆ ಇದ್ದೇ ಇದೆ;
ಹಾಡು ಪಾಡು;
ಜಗಳ ಪ್ರೀತಿ;
ಫೋಟೋ ಫಿಲ್ಮು;
ಕತೆ ಕಾವ್ಯ;
ರಸಿಕತೆ ಉಕ್ಕಿದರೆ ತಪ್ಪದೆ.
ಸೂರ್ಯ ಯಾವುದಾದರೇನು? ಕಾಲು ಯಾವುದಾದರೇನು?
ಜೇಬಲ್ಲಿ ಮರ ಇರಬೇಕು.
ಜೋಳಿಗೇಲಿ ಚಂದ್ರ ಇರಬೇಕು.
ನಡೀವಾಗ ಯಾರಾದರೂ ಜತೆ ಇರಬೇಕು.

Advertisements

2 thoughts on “ಸೂರ್ಯ ಕಾಲು

  1. ಅನಿವಾಸಿ,
    ಪುಟ್ಟಪುಟ್ಟ ವಾಕ್ಯಗಳಲ್ಲಿ ಏನೆಲ್ಲ ಸೆರೆಹಿಡಿದಿದ್ದೀರಿ!
    ನಡೀವಾಗ ಯಾರಾದರು ಜೊತೆ ಇರಬೇಕು.
    ನಮ್ಮೆಲ್ಲರ ಹಂಬಲಗಳು ಒಂದೆ ಎರಡೆ?.
    ಪದಗಳು ಸರಿಯಾಗಿ ಸಿಗುತ್ತ ಇಲ್ಲ, ಆದರೂ,
    ಓದಿ ಖುಶಿಯಾಗಿ ಓಡಾಡಿಕೊಂಡಿದೇನೆ.
    ಟೀನಾ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s